ಆತಂಕಕಾರಿ ಗುಣಮಟ್ಟ ತಲುಪಲಿರುವ ಮೈಸೂರಿನ ಏರ್ ಕ್ವಾಲಿಟಿ...!
ಬೆಂಗಳೂರು : ಮೈಸೂರಿನಲ್ಲಿ ಏರ್ ಕ್ವಾಲಿಟಿ ಆತಂಕಕಾರಿ ಗುಣಮಟ್ಟ ತಲುಪುತ್ತಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ . ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ಇಂದು ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವು ಕಡೆ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ. ಆದರೂ ಮೈಸೂರಿನ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಂಗಳೂರಿನ ವಾಯುಗುಣಮಟ್ಟ ಇಂದು ಹದಗೆಟ್ಟ ಸ್ಥಿತಿಯಲ್ಲೇ ಇದೆ. ಆದರೆ ಇದನ್ನೂ ಮೀರಿಸುವಂತೆ ಮೈಸೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ವಾಯು ಗುಣಮಟ್ಟ ಎಲ್ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 166ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇರುವಾಗಲೇ ಮೈಸೂರಿನ AQI 185 ತಲುಪಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ಇತರೆ ಸುದ್ದಿಗಳು