ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ದಂತವೈದ್ಯನ ಎಡವಟ್ಟು!  ಹಲ್ಲು ಕೀಳಿಸಲು ಬಂದಿದ್ದ ಮಹಿಳೆ ಬಲಿ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 25-03-2026

ದಂತವೈದ್ಯನ ಎಡವಟ್ಟು! ಹಲ್ಲು ಕೀಳಿಸಲು ಬಂದಿದ್ದ ಮಹಿಳೆ ಬಲಿ...

ಹಲ್ಲು ಕೀಳಿಸಲು ಹೋದ ಮಹಿಳೆಯೊಬ್ಬರು ವೈದ್ಯರ ಎಡವಟ್ಟಿನಿಂದಾಗಿ ಕ್ಲಿನಿಕ್‌ನಲ್ಲೇ ಪ್ರಾಣ ಬಿಟ್ಟಂತಹ ಆಘಾತಕಾರಿ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಹಲ್ಲು ಕೀಳಿಸಲು ಹೋದ ಮಹಿಳೆಯೊಬ್ಬರು ವೈದ್ಯರ ಎಡವಟ್ಟಿನಿಂದಾಗಿ ಕ್ಲಿನಿಕ್‌ನಲ್ಲೇ ಪ್ರಾಣ ಬಿಟ್ಟಂತಹ ಆಘಾತಕಾರಿ ಘಟನೆ ನಡೆದಿದೆ. ಘಟನೆಯ ನಂತರ ಆರೋಪಿ ವೈದ್ಯ ಪರಾರಿಯಾಗಿದ್ದು, ಮಹಿಳೆಯ ಪತಿ ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 35 ವರ್ಷದ ಮಹಿಳೆ ಬಿಜಂತಿ ದೇವಿಯವರಿಗೆ ಕೆಲ ದಿನಗಳಿಂದ ಹಲ್ಲು ನೋವು ಕಾಣಿಸಿಕೊಂಡಿದ್ದು, ಇದಕ್ಕೊಂದು ಮುಕ್ತಿ ನೀಡುವುದಕ್ಕಾಗಿ ಅವರು ಹಲ್ಲನ್ನು ಕೀಳಿಸಲು ನಿರ್ಧರಿಸಿ ಹರಿಹರಗಂಜ್‌ನಲ್ಲಿರುವ ಖಾಸಗಿ ಡೆಂಟಲ್ ಕ್ಲಿನಿಕ್ ಆದ ಜನತಾ ದಂತ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅವರಿಗೆ ವೈದ್ಯರು ತಪಾಸಣೆ ಮಾಡಿದ್ದಾರೆ. ಹಲ್ಲನ್ನು ಕೀಳುವುದಕ್ಕೆ ಲೋಕಲ್ ಅನಸ್ಥೇಸಿಯಾವನ್ನು ಕೂಡ ನೀಡಿದ್ದಾರೆ. ಇದಾದ ನಂತರ ಬಿಜಂತಿ ದೇವಿ ಮೇಲೆ ಎದ್ದಿಲ್ಲ. ಈ ಹಿನ್ನೆಲೆಯಲ್ಲಿ ಜಾರ್ಖಂಡ್‌ನ ಪಲಮು ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಬಿಜಂತಿ ದೇವಿ ಅವರಿಗೆ ಚಿಕಿತ್ಸೆ ನೀಡಿದ ದಂತ ವೈದ್ಯ ಘಟನೆ ಬಳಿಕ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ಪತಿ 36 ವರ್ಷದ ಮುಕೇಶ್ ಚಂದ್ರ ಭಾರತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಾವು ಬಿಹಾರದ ಔರಂಗಾಬಾದ್ ಜಿಲ್ಲೆಯ ನಿವಾಸಿಯಾಗಿದ್ದು, ಚಿಕಿತ್ಸೆ ಸಮಯದಲ್ಲಿ ವೈದ್ಯರು ತಪ್ಪಾಗಿ ನೀಡಿದ ಚುಚ್ಚುಮದ್ದಿನ ಬಳಿಕ ತಮ್ಮ ಪತ್ನಿ ಸಾವನ್ನಪ್ಪಿದ್ದಾಗಿ ಹೇಳಿದ್ದಾರೆ. ಹಲ್ಲು ನೋವು ಕಾಣಿಸಿಕೊಂಡ ಹಿನ್ನೆಲೆ ಮುಕೇಶ್ ಚಂದ್ರ ಭಾರತಿ ಅವರು ತಮ್ಮ ಪತ್ನಿ ಬಿಜಂತಿ ದೇವಿ ಅವರನ್ನು ಮುಂಜಾನೆ 10.30ರ ಸುಮಾರಿಗೆ ಈ ಜನತಾ ಡೆಂಟಲ್ ಕ್ಲಿನಿಕ್‌ಗೆ ಕರೆದುಕೊಂಡು ಬಂದಿದ್ದರು. ಅವರ ಬಾಯಲ್ಲಿ ಅರ್ಧ ಮುರಿದ ಹಲ್ಲೊಂದಿತ್ತು. ಇದು ಅವರಿಗೆ ಭಾರಿ ಕಿರಿಕಿರಿ ಉಂಟು ಮಾಡುತ್ತಿತ್ತು. ಅಲ್ಲಿ ನಮ್ಮ ಗ್ರಾಮದ ಅನೇಕರು ಈ ಹಿಂದೆ ಚಿಕಿತ್ಸೆ ಪಡೆದಿದ್ದರು. ಹಾಗೆಯೇ ನಾವು ಕೂಡ ಆ ವೈದ್ಯರನ್ನು ಸಂಪರ್ಕಿಸಿ ಅಲ್ಲಿಗೆ ಚಿಕಿತ್ಸೆಗಾಗಿ ಹೋದೆವು ಆ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ವಿವರಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+