ಆಂಧ್ರಪ್ರದೇಶದಲ್ಲಿ ಹೊತ್ತಿ ಉರಿದ ಬಸ್ ! 10ಮಂದಿ ಪ್ರಯಾಣಿಕರು ಸಜೀವ ದಹನ
ಆಂಧ್ರ ಪ್ರದೇಶ :ಅಂದ್ರ ಪ್ರದೇಶದಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ನಿದ್ದೆಯ ಮಂಪರಿನಲ್ಲಿದ್ದಾಗಲೇ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಬೆಳ್ಳ ಬೆಳಗ್ಗೆ ಹರಿಕೃಷ್ಣ ಖಾಸಗಿ ಟ್ರಾವೆಲ್ಸ್ ಬಸ್, ಲೋಡ್ ಆಗಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಈ ಅಪಘಾತದಲ್ಲಿ 10 ಪ್ರಯಾಣಿಕರು ಜೀವಂತ ದಹನವಾಗಿದ್ದಾರೆ ಎಂದು ವರದಿ ಆಗಿದೆ. ಆಂಧ್ರಪ್ರದೇಶದ ರಾಯಲಸೀಮೆಯ ಮಾರ್ಕಪುರಂ ಜಿಲ್ಲೆಯಲ್ಲಿ ಈ ಭೀಕರ ಬಸ್ ದುರಂತ ಸಂಭವಿಸಿದೆ. ರಾಯವರಂನ ಹಲಗೆ ಕ್ವಾರಿಯ ಬಳಿ ಬಸ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದೆ. ಬಸ್‌ನಲ್ಲಿ ಇದ್ದ ಒಟ್ಟು 40 ಪ್ರಯಾಣಿಕರಿದ್ದರು ಎನ್ನಲಾಗ್ತಿದ್ದು, ರಕ್ಷಣಾ ಕಾರ್ಯಚರಣೆಯಲ್ಲಿ ಕೆಲವರು ಬದುಕುಳಿದಿದ್ದು ,10 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ಆಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದಾಗ, ಎಲ್ಲಾ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಅಪಘಾತ ಸಂಭವಿಸಿದ ಕೂಡಲೇ ಅನೇಕರಿಗೆ ಏನಾಗುತ್ತಿದೆ ಎಂಬುದರ ಅರಿವಿರಲಿಲ್ಲ. ಬಸ್ಸಿನ ಮುಂಭಾಗದಿಂದ ಬೆಂಕಿ ಕಾಣಿಸಿಕೊಂಡಿದ್ದರಿಂದ, ಪ್ರಯಾಣಿಕರು ತಪ್ಪಿಸಿಕೊಳ್ಳುವುದು ಕಷ್ಟಕರವಾಯ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇತರೆ ಸುದ್ದಿಗಳು