ಭಾರತದಲ್ಲಿ ಸಾಕಷ್ಟು ರಸಗೊಬ್ಬರ ಸಂಗ್ರಹವಿದೆ , ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ: ಮೋದಿ ಭರವಸೆ
ನವದೆಹಲಿ: ಪ್ರಧಾನಿ ಮೋದಿ ಅವರು ಭಾರತದಲ್ಲಿ ಸಾಕಷ್ಟು ರಸಗೊಬ್ಬರ ಸಂಗ್ರಹವಿದೆ ಎಂದು ರೈತರಿಗೆ ಭರವಸೆ ನೀಡಿದ್ದಾರೆ, ಮಧ್ಯಪ್ರಾಚ್ಯ ಯುದ್ಧದಿಂದ ಎಲ್ಪಿಜಿ, ಪೆಟ್ರೋಲ್ ಮತ್ತು ರಸಗೊಬ್ಬರಗಳ ಮೇಲೆ ಪರಿಣಾಮ ಬೀರಿದ್ದರೂ, ರೈತರಿಗೆ ಯಾವುದೇ ತೊಂದರೆಯಾಗಲು ಬಿಡುವುದಿಲ್ಲ ಎಂದಿದ್ದಾರೆ. ಜಾಗತಿಕ ಆರ್ಥಿಕತೆಯ ಮೇಲಿನ ಯುದ್ಧದ ದುಷ್ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಪೂರೈಕೆ ಸರಪಳಿಯನ್ನು ಸುಸ್ಥಿತಿಯಲ್ಲಿಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವ ಕಾರಣ ಎಲ್ಪಿಜಿ, ಪೆಟ್ರೋಲ್ ಹಾಗೂ ರಸಗೊಬ್ಬರಗಳ ಮೇಲೆ ಸ್ವಲ್ಪ ಪ್ರಮಾಣದ ಪರಿಣಾಮ ಬೀರಿದೆ. ಆದರೆ ದೇಶದಲ್ಲಿ ರಸಗೊಬ್ಬರಗಳ ಸಾಕಷ್ಟು ಸಂಗ್ರಹವಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರೈತರು ಈಗ ಡೀಸೆಲ್ ಮೇಲಿನ ಅವಲಂಬನೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಜಾಗತಿಕ ಆರ್ಥಿಕತೆ ಮೇಲೆ ದುಷ್ಪರಿಣಾಮ ಯುದ್ಧವು ಇಡೀ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿದೆ, ಹೆಚ್ಚಿನ ಪ್ರಮಾಣದ ಕಚ್ಚಾ ತೈಲ ಮತ್ತು ಅನಿಲ ಮಧ್ಯಪ್ರಾಚ್ಯದಿಂದ ಬರುತ್ತಿದೆ, ಆದ್ದರಿಂದ ಈ ಯುದ್ಧದ ಬಗ್ಗೆ ಭಾರತದ ಕಳವಳ ಸಹಜ. ಯುದ್ಧ ಪ್ರಾರಂಭವಾದಾಗಿನಿಂದ, ಪೀಡಿತ ದೇಶಗಳಲ್ಲಿರುವ ಪ್ರತಿಯೊಬ್ಬ ಭಾರತೀಯರಿಗೂ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗಿದೆ ಎಂದರು. ಪಶ್ಚಿಮ ಏಷ್ಯಾದ ಪರಿಸ್ಥಿತಿ ಚಿಂತಾಜನಕವಾಗಿದೆ, ಈ ಬಿಕ್ಕಟ್ಟನ್ನು ಆದಷ್ಟು ಬೇಗ ಕೊನೆಗೊಳಿಸಲು ಪರಿಹಾರ ಕಂಡುಕೊಳ್ಳುವಂತೆ ಇಡೀ ಜಗತ್ತಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿ ಚಿಂತಾಜನಕವಾಗಿದೆ, ಕಳೆದ ಎರಡು ಮೂರು ವಾರಗಳಲ್ಲಿ, ವಿದೇಶಾಂಗ ಸಚಿವ ಜೈಶಂಕರ್ ಮತ್ತು ಸಚಿವ ಹರ್ದೀಪ್ ಪುರಿ ಈ ವಿಷಯದ ಬಗ್ಗೆ ಸಂಸತ್ತಿಗೆ ಪ್ರಮುಖ ಮಾಹಿತಿಯನ್ನು ಒದಗಿಸಿದ್ದಾರೆ. ಈ ಬಿಕ್ಕಟ್ಟು ಈಗ ಮೂರು ವಾರಗಳಿಗೂ ಹೆಚ್ಚು ಕಾಲ ಮುಂದುವರೆದಿದೆ. ಇದು ಜಾಗತಿಕ ಆರ್ಥಿಕತೆ ಮತ್ತು ಜನರ ಜೀವನದ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರುತ್ತಿದೆ. ಆದ್ದರಿಂದ, ಇಡೀ ಜಗತ್ತು ಎಲ್ಲಾ ಪಕ್ಷಗಳು ಈ ಬಿಕ್ಕಟ್ಟನ್ನು ಸಾಧ್ಯವಾದಷ್ಟು ಬೇಗ ಪರಿಹರಿಸುವಂತೆ ಒತ್ತಾಯಿಸುತ್ತಿದೆ.
ಇತರೆ ಸುದ್ದಿಗಳು