ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಏಪ್ರಿಲ್  9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 08-04-2026

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಯುತ್ತಿದ್ದ ರಿಸಲ್ಟ್ ದಿನ ಕೊನೆಗೂ ಅನೌನ್ಸ್ ಆಗಿದ್ದು, ನಾಳೆ ಅಂದರೆ, ಏಪ್ರಿಲ್ 9 ಗುರುವಾರ ಸಂಜೆಯ ಬಳಿಕ ಘೋಷಣೆಯಾಗಲಿದೆ. ಲಕ್ಷಾಂತರ ವಿದ್ಯಾರ್ಥಿಗಳು ನಿರೀಕ್ಷೆ ಇಟ್ಟಿರುವ ದ್ವಿತೀಯ ಪಿಯುಸಿ ರಿಸಲ್ಟ್‌ಗೆ ಕಡೆಗೂ ದಿನಾಂಕ ಮರುನಿಗದಿಯಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಬೇಕಿತ್ತು. ಆದರೆ ಮುಂದೂಡಿಕೆಯಾದ ಹಿನ್ನೆಲೆ, ಏಪ್ರಿಲ್ 9 ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಾಳೆ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯ ಮತದಾನ ಇರುವುದರಿಂದ ಇದು ಮುಗಿದ ಬಳಿಕ, ಸಂಜೆ ಸಚಿವರು ಸುದ್ದಿಗೋಷ್ಟಿ ನಡೆಸಿ , ಫಲಿತಾಂಶ ಘೋಷಣೆ ಮಾಡಲಿದ್ದಾರೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಪ್ರಕಟಣೆ ಮೂಲಕ ತಿಳಿಸಿದ್ದು, ಏಪ್ರಿಲ್ 7 ರಂದು ಫಲಿತಾಂಶ ಪ್ರಕಟಿಸುತ್ತಿಲ್ಲ. ಕೊನೆಯ ಹಂತದ ಮೌಲ್ಯಮಾಪನ ಕೆಲಸ ಬಾಕಿ ಇರುವುದರಿಂದ ಫಲಿತಾಂಶ ಪ್ರಕಟಿಸಲಾಗುತ್ತಿಲ್ಲ ಎಂದು ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್ ಮಾಹಿತಿ ಕೊಟ್ಟಿದ್ದರು. ಇದೀಗ ಗುರುವಾರ, ಏಪ್ರಿಲ್ 9 ಕ್ಕೆ ಪರೀಕ್ಷೆ ದಿನಾಂಕ ಮರುನಿಗದಿಯಾಗಿದೆ.ಇನ್ನೊಂದೆಡೆ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ ಅಂದರೆ ಏ.9 ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದ್ದಾರೆ. ಈ ಬಾರಿ ಡಿಜಿ ಲಾಕರ್‌ ಮೂಲಕವೂ ವಿದ್ಯಾರ್ಥಿಗಳು ಫಲಿತಾಂಶ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದ್ದು, ಸರ್ವರ್‌ ಸಮಸ್ಯೆಯಿಂದಾಗುತ್ತಿದ್ದ ಸಮಸ್ಯೆಗಳು ನಿವಾರಣೆಯಾಗುವ ನಿರೀಕ್ಷೆಯಿದೆ, ಎಂದು ಅವರು ತಿಳಿಸಿದ್ದಾರೆ. ಏ.9ರಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಅಂದೇ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ karresults.nic.in. ನಲ್ಲಿ ಫಲಿತಾಂಶ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕ ಹಾಕಿ ರಿಸಲ್ಟ್ ನೋಡಬಹುದು. ಅಂಕಪಟ್ಟಿ ಡೌನ್ಲೋಡ್ ಮಾಡಿ, ಪ್ರಿಂಟ್ ಕುಡಾ ತೆಗೆದುಕೊಳ್ಳಬಹುದು. ಈ ವರ್ಷ ಒಟ್ಟು 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ರಿಸಲ್ಟ್‌ಗಾಗಿ ಎದುರುನೋಡುತ್ತಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 242+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3294+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3335+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3392+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3494+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3542+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3574+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3618+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3666+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3679+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3753+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3813+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6034+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6096+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6148+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6202+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6364+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6392+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6522+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6703+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 8906+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9071+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9132+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9304+