ಕಾಂಗ್ರೆಸ್ ಬಂಡಾಯದ ನಡುವೆಯೂ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಒಗ್ಗಟ್ಟಿನ ಪ್ರದರ್ಶನ
ದಾವಣಗೆರೆ: ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಬಂಡಾಯದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಗ್ಗಟ್ಟಿನ ಸಂದೇಶ ನೀಡಿದರು. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದಿರುವ ಕುರಿತು ಅಸಮಾಧಾನದ ನಡುವೆಯೂ, ಮುಸ್ಲಿಮರು ನಮ್ಮೊಂದಿಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ, ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಡಿಕೆಶಿ ಬ್ಯಾಟಿಂಗ್ ಮಾಡಿ, ಪಕ್ಷದಲ್ಲಿ ಸಾಮರಸ್ಯ ಇದೆ ಎಂದರು. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಕಾರಣ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಬಂಡಾಯದ ಬಿಸಿ ಎದುರಿಸುತ್ತಿರುವ ಕಾಂಗ್ರೆಸ್ ಇವುಗಳೆಲ್ಲದರ ನಡುವೆಯೂ ಸೋಮವಾರ ಒಗ್ಗಟ್ಟು ಪ್ರದರ್ಶನ ಮಾಡಿತು. ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವರು ಒಗ್ಗಟ್ಟು ಪ್ರದರ್ಶಿಸಿದರು. ಅಲ್ಪಸಂಖ್ಯಾತ ನಮ್ಮ ಜತೆಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ, ಮುಸ್ಲಿಮರು ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ. ಆದರೆ ನಾವು ಒಗ್ಗಟ್ಟಾಗಿದ್ದೇವೆ, ಚುನಾವಣೆ ಗೆಲ್ಲುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಕಾಂಗ್ರೆಸ್ ಪಕ್ಷವು ಜಾತಿ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುವುದಿಲ್ಲ. ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಇದು ಎಲ್ಲರನ್ನೂ ಒಳಗೊಳ್ಳುವ, ಸಮಗ್ರ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ಪಕ್ಷಕ್ಕೆ ದಾವಣಗೆರೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಇತರೆ ಸುದ್ದಿಗಳು