ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ  ಜೆಡಿಎಸ್ ಗೆ ಸೇರ್ಪಡೆ ...!
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 25-05-2026

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಇಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರು ಪಕ್ಷದ ಧ್ವಜವನ್ನು ನೀಡಿ ಜಾಹ್ನವಿ ಅವರನ್ನು ಸ್ವಾಗತಿಸಿದರು. ಜಾಹ್ನವಿ ಅವರು ಜೆಡಿಎಸ್‌ ಪಕ್ಷವನ್ನು ಸೇರುವ ಮೂಲಕ ಅಧಿಕೃತವಾಗಿ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಟಿವಿ ಶೋ, ರಿಯಾಲಿಟಿ ಶೋ, ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ಜಾಹ್ನವಿ ಈಗ ರಾಜಕೀಯಕ್ಕೆ ಎಂಟ್ರಿ ಕೊಟ್ಟು ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ. ಬಿಗ್‌ ಬಾಸ್‌ನಿಂದ ಹೊರಬಂದ ನಂತರ ಬಡವರಿಗೆ ಸಹಾಯ ಮಾಡುವಂತಹ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಜಾಹ್ನವಿ, ಇದೀಗ ತಮ್ಮ ಜೀವನದ ಹೊಸ ಕಾರ್ಯ ಆರಂಭಿಸಿದ್ದಾರೆ. ಜೆಡಿಎಸ್ ಮಹಿಳಾ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ಇವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸದ್ಯಕ್ಕೆ ಯಾವುದೇ ಪದಾಧಿಕಾರಿ ಹುದ್ದೆ, ಸಂಘಟನಾ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ತಿಳಿಸಲಾಗಿದೆ ಎಂದು ಪಕ್ಷದ ಮೂಲಕಗಳು ತಿಳಿಸಿವೆ. ಬಿಗ್‌ಬಾಸ್‌ನಲ್ಲಿ ಭಾಗಹಿಸಿರುವಂತಹವರು, ಕನ್ನಡ ಸಿನಿಮಾದಲ್ಲಿ ನಟಿಸಿದ, ಟಿವಿ ಮಾಧ್ಯಮದ ನಿರೂಪಕಿ ಜಾಹ್ನವಿ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಪಕ್ಷಕ್ಕೆ ಒಂದು ಉತ್ತರ ಹೆಸರು ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಅವರನ್ನು ನಗರ ಘಟಕದ ಅಧ್ಯಕ್ಷರು ಸ್ವಾಗತಿಸುತ್ತಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದರು. ಬಳಿಕ ಜಾಹ್ನವಿ ಕಾಲಿಗೆ ಬಿದ್ದು ಸಚಿವರ ಆಶೀರ್ವಾದ ಪಡೆದುಕೊಂಡರು. ಜಾಹ್ನವಿ ಅವರು ಮೂಲತಃ ಸುದ್ದಿ ವಾಹಿನಿಯ ನಿರೂಪಕಿಯಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. ಆನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ನನ್ನಮ್ಮ ಸೂಪರ್ ಸ್ಟಾರ್, ಮತ್ತು ಗಿಚ್ಚಿ ಗಿಲಿಗಿಲಿ, ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸುವ ಮೂಲಕ ಕಿರುತೆರೆ ವೀಕ್ಷಕರಿಗೆ ಹತ್ತಿರವಾದರು. ಇತ್ತೀಚೆಗೆ ಅಧಿಪತ್ರ ಎಂಬ ಕನ್ನಡ ಸಿನಿಮಾದಲ್ಲಿ ನಾಯಕಿಯಾಗಿಯೂ ನಟಿಸಿ, ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1789+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2019+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4482+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4660+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4681+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4760+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7239+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7720+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7758+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12953+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13077+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13353+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13373+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27341+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30379+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30399+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30428+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33432+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33437+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33559+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33653+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33683+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39230+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39318+