ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬಾಲ ಗರ್ಭಿಣಿಯರ ಪ್ರಕರಣಗಳ ಹೆಚ್ಚಳ ! ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 04-04-2026

ಬಾಲ ಗರ್ಭಿಣಿಯರ ಪ್ರಕರಣಗಳ ಹೆಚ್ಚಳ ! ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ

ಬೆಂಗಳೂರು : ರಾಜ್ಯದಲ್ಲಿ ಬಾಲ ಗರ್ಭಿಣಿಯರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾಗಿ ಚಿಕಿತ್ಸೆಗೆ ದಾಖಲಾದಲ್ಲಿ ಆ ಬಗ್ಗೆ ತಕ್ಷಣವೇ ಇಲಾಖೆಗೆ ಮಾಹಿತಿ ನೀಡುವುದು ಇನ್ನು ಮುಂದೆ ಕಡ್ಡಾಯವಾಗಲಿದೆ. ಕಾಯಿದೆ 2012ರ ಅಡಿಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರು ಗರ್ಭ ಧರಿಸುವುದು ಗಂಭೀರ ಅಪರಾಧವೆಂದು ಪರಿಗಣಿಸಲಾಗುತ್ತದೆ. ಇಂತಹ ಪ್ರಕರಣಗಳು ಖಾಸಗಿ ಆಸ್ಪತ್ರೆಗಳಲ್ಲಿ ಪತ್ತೆಯಾದಾಗ, ಸಂಬಂಧಪಟ್ಟ ವೈದ್ಯರು ಅಥವಾ ಆಸ್ಪತ್ರೆ ಆಡಳಿತ ಮಂಡಳಿಯು ವಿಳಂಬ ಮಾಡದೆ ಹತ್ತಿರದ ಪೊಲೀಸ್‌‍ ಠಾಣೆ ಅಥವಾ ವಿಶೇಷ ಬಾಲ ನ್ಯಾಯ ಪೊಲೀಸ್‌‍ ಘಟಕಕ್ಕೆ ಮಾಹಿತಿ ನೀಡಬೇಕು.ಒಂದು ವೇಳೆ ಪ್ರಕರಣವನ್ನು ಮುಚ್ಚಿಟ್ಟರೆ ಅಥವಾ ವರದಿ ಮಾಡಲು ವಿಫಲವಾದರೆ, ಕಾಯಿದೆಯ ಸೆಕ್ಷನ್‌ 2112ರ ಅಡಿಯಲ್ಲಿ ಆಸ್ಪತ್ರೆಯ ಜವಾಬ್ದಾರಿಯುತ ವ್ಯಕ್ತಿಗೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಅವಕಾಶವಿದೆ. ಕೇವಲ ವೈದ್ಯರಷ್ಟೇ ಅಲ್ಲದೆ, ಸಂಸ್ಥೆಯ ಮುಖ್ಯಸ್ಥರೂ ಈ ಶಿಕ್ಷೆಗೆ ಗುರಿಯಾಗಲಿದ್ದಾರೆ. ಇಂತಹ ಪ್ರಕರಣಗಳು ದಾಖಲಾದ ಕೂಡಲೇ ಮಕ್ಕಳ ಸಹಾಯವಾಣಿ 1098 ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ರೋಗಿಯ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದೆ ಕೇವಲ ತನಿಖಾಧಿಕಾರಿಗಳಿಗೆ ಮಾತ್ರ ಅಗತ್ಯ ಸಹಕಾರ ನೀಡಬೇಕು. ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳಿಗೆ ಕಾಯಿದೆಯ ನಿಯಮಗಳ ಬಗ್ಗೆ ಅರಿವು ಮೂಡಿಸುವುದು ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ.ಈ ಮಾರ್ಗಸೂಚಿಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು ನಿಯಮ ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಕಾನೂನುಬದ್ಧ ದಂಡನಾತಕ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1909+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2139+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4602+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4780+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4801+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4880+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7359+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7840+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7878+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13074+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13197+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13473+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13493+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27461+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30499+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30519+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30548+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33552+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33557+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33679+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33773+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33804+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39350+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39439+