ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮ್ಯಾಚ್ ! ಮಾರ್ಚ್ 28ಕ್ಕೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಂದು ನಡೆಯಲಿರುವ ಆರ್‌ಸಿಬಿ ಪಂದ್ಯಕ್ಕೆ ಸಂಚಾರಿ ಪೊಲೀಸರು ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದಾರೆ. ಎಂಜಿ ರಸ್ತೆ, ಕ್ವೀನ್ಸ್ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದ್ದು, ಪಾರ್ಕಿಂಗ್ ಮತ್ತು ಮೆಟ್ರೋ ಸಂಚಾರದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ . ಮಾರ್ಚ್ 28ಕ್ಕೆ ಐಪಿಎಲ್ ಆರಂಭವಾಗಲಿದ್ದು, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಹಾಗೂ ಎಸ್ಆರ್ಎಚ್ ಮಧ್ಯೆ ಮ್ಯಾಚ್ ನಡೆಯಲಿದೆ. ಪಂದ್ಯಕ್ಕೆ ನಗರ ಪೊಲೀಸರು ಭಾರೀ ಭದ್ರತೆ ಒದಗಿಸುತ್ತಿದ್ದು, ಸಂಚಾರ ಸಮಸ್ಯೆ ನಿರ್ವಹಣೆಗೂ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಅಡ್ವೈಸರಿ ಪ್ರಕಟಿಸಿದ್ದು, ಅಭಿಮಾನಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕಾಗಿ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ.ಕಳೆದ ವರ್ಷದ ಕಾಲ್ತುಳಿತ ಘಟನೆ ಮರುಕಳಿಸದಂತೆ ಈ ಬಾರಿ ಬಿಗಿ ಭದ್ರತೆ, ಎಐ ಕ್ಯಾಮರಾ ಕಣ್ಗಾವಲು, ಹೆಚ್ಚಿನ ಪ್ರವೇಶ ದ್ವಾರಗಳು ಹಾಗೂ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಇತರೆ ಸುದ್ದಿಗಳು