ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಅಬ್ಬರ ! 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಇನ್ನೆರಡು ದಿನ ವರುಣ ಅಬ್ಬರಿಸಲಿದ್ದಾನೆ .ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಹವಾಮಾನ ಇಲಾಖೆ ಮುನ್ಸೂಚನೆ ಹೊರಡಿಸಿದೆ . ಕರ್ನಾಟಕದಲ್ಲಿ ಈಗ ದಿನೇ ದಿನೇ ಹವಾಮಾನ ಬದಲಾವಣೆಯಾಗುತ್ತಿದೆ. ಬಿರು ಬೇಸಿಗೆಯಲ್ಲೂ ವರುಣದೇವ ಅಬ್ಬರಿಸುತ್ತಿದ್ದಾನೆ. ವಾತಾವರಣ ಸಕ್ರಿಯವಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಮಳೆ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆ ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಮಳೆ ಬೇಸಿಗೆಯಲ್ಲೂ ಜನರಿಗೆ ಕೊಂಚ ರಿಲೀಫ್ ನೀಡುತ್ತಿದೆ, ಆದ್ರೆ ಇನ್ನೂ ಕೆಲವೆಡೆ ಈ ಮಳೆ ಭಾರೀ ಅವಾಂತರ ಸೃಷ್ಟಿಸುತ್ತಿದೆ. ರಾಜ್ಯದ 14 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕರ್ನಾಟಕ ಭಾಗಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಕರಾವಳಿ ಭಾಗವಾದ ಉತ್ತರ ಕನ್ನಡ, ಉಡುಪಿ ಮತ್ತು ಇತ್ತ ಮಲೆನಾಡು ಮತ್ತು ದಕ್ಷಿಣ ಭಾಗವಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.
ಇತರೆ ಸುದ್ದಿಗಳು