ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮನುಸ್ಮೃತಿ ದಹನ ದಿನ
ವರದಿಗಾರರು : ಬಸವರಾಜ ಪೂಜಾರಿ | ಸ್ಥಳ : ಬೀದರ | ದಿನಾಂಕ : 26-12-2025

ಮನುಸ್ಮೃತಿ ದಹನ ದಿನ

1927ರ ಡಿಸೆಂಬರ್ 25ರಂದು ಮಹಾಮಾನವ ಡಾ. ಬಿ.ಆರ್. ಅಂಬೇಡ್ಕರ್ ಅವರು ಶ್ರೇಣಿಕೃತ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ಲಿಂಗಭೇದ, ಮಹಿಳೆಯರ ಮೇಲಿನ ದಬ್ಬಾಳಿಕೆ ಸೇರಿದಂತೆ ಅನಿಷ್ಟ ಸಾಮಾಜಿಕ ಪದ್ಧತಿಗಳ ಮೂಲವಾಗಿದ್ದ ಮನುಸ್ಮೃತಿಯನ್ನು ಸಾರ್ವಜನಿಕವಾಗಿ ದಹಿಸಿದ ಐತಿಹಾಸಿಕ ದಿನಕ್ಕೆ ಇಂದು 98 ವರ್ಷಗಳು ಪೂರ್ಣಗೊಂಡಿವೆ.

ಜಾತಿ, ಮೇಲು–ಕೀಳು ಭಾವನೆ, ಸತಿಸಹಗಮನ, ಬಾಲ್ಯವಿವಾಹ, ದೇವದಾಸಿ ಪದ್ಧತಿ, ಬತ್ತಲೆ ಸೇವೆ ಮುಂತಾದ ಅನೇಕ ಅನ್ಯಾಯಗಳಿಗೆ ಕಾರಣವಾಗಿದ್ದ ಮನುವಾದಿ ಸಂಹಿತೆಗೆ ಡಾ. ಅಂಬೇಡ್ಕರ್ ಅವರು ಬೆಂಕಿ ಹಚ್ಚುವ ಮೂಲಕ ಸಮಾನತೆ, ಸ್ವಾತಂತ್ರ‍್ಯ ಹಾಗೂ ಭಾತೃತ್ವದ ಹೋರಾಟಕ್ಕೆ ದಿಕ್ಕು ತೋರಿಸಿದ್ದರು.ಸ್ವಾತಂತ್ರ‍್ಯ ಭಾರತಕ್ಕೆ ಸಮಾನತೆಯ ಆಶಯದ ಸಂವಿಧಾನವನ್ನು ರೂಪಿಸಿದ ಡಾ. ಅಂಬೇಡ್ಕರ್ ಅವರ ಕೊಡುಗೆ ಅಮೂಲ್ಯವಾಗಿದ್ದು, ಸಂವಿಧಾನ ಅಂಗೀಕಾರದ ಸಂದರ್ಭದಲ್ಲಿಯೇ ಕೆಲವು ಸಂಘಟನೆಗಳು ಸಂವಿಧಾನದ ವಿರುದ್ಧ ಅಸಹನೆಯನ್ನು ವ್ಯಕ್ತಪಡಿಸಿದ್ದವು.

ಇಂದಿಗೂ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸವಾಲುಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ದಲಿತ ಸಂಘರ್ಷ ಸಮಿತಿ ಅಭಿಪ್ರಾಯಪಟ್ಟಿದೆ.ಈ ಹಿನ್ನೆಲೆಯಲ್ಲಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟದ ಸ್ಮರಣಾರ್ಥವಾಗಿ ಹಾಗೂ ಸಮಾನತೆಯ ಸಂದೇಶವನ್ನು ಸಮಾಜಕ್ಕೆ ತಲುಪಿಸುವ ಉದ್ದೇಶದಿಂದ  ದಲಿತ ಸಂಘರ್ಷ ಸಮಿತಿ ಬೀದರ್ ಜಿಲ್ಲಾ ಶಾಖೆಯ ಜಿಲ್ಲಾ ಸಂಚಾಲಕ ತುಕಾರಾಮ ಲಾಡಕರ ಅವರ ನೇತೃತ್ವದಲ್ಲಿ ಇಂದು ನಗರದ ಅಂಬೇಡ್ಕರ್ ವೃತ್ತದಲ್ಲಿ ಸಾಂಕೇತಿಕವಾಗಿ ಮನುಸ್ಮೃತಿ ದಹನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು

ಕಾರ್ಯಕ್ರಮದಲ್ಲಿ ಸಂದೀಪ ಕಾಟೆ, ಪ್ರದೀಪ ನಾಟೇಕರ್, ಶಿವಕುಮಾರ ನೀಲಕಟ್ಟಿ, ರವೀಂದ್ರ ಗೌಂಡೆ, ಸುನೀಲ ಸಂಗಮ, ಶಿವರಾಜ ಲಾಡಕರ, ರಾಜಕುಮಾರ ಚಂದನ, ವಿಠಲ ಲಾಡೆ, ಮಲ್ಲಿಕಾರ್ಜುನ ಭಂಡಾರಿ, ಶ್ರೀಪತರಾವ ದೀನೆ ಸೇರಿದಂತೆ ಅನೇಕ ದಲಿತ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.  

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+