ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಪರಮಾಣು ಶಸ್ತ್ರಾಸ್ತ್ರ ತ್ಯಾಗಕ್ಕೆ ಇರಾನ್‌ ಒಪ್ಪಿದೆ : ಡೊನಾಲ್ಡ್‌ ಟ್ರಂಪ್‌
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 26-03-2026

ಪರಮಾಣು ಶಸ್ತ್ರಾಸ್ತ್ರ ತ್ಯಾಗಕ್ಕೆ ಇರಾನ್‌ ಒಪ್ಪಿದೆ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯ ಯುದ್ಧದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಿನಕ್ಕೊಂದು ಹೇಳಿಕೆ ಕೊಡುವುದನ್ನು ಮುಂದುವರಿಸಿದ್ದು, ಇರಾನ್‌ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದದಿರಲು ಒಪ್ಪಿಕೊಂಡಿದೆ. ಜೊತೆಗೆ, ಹೋರ್ಮುಜ್‌ ಜಲಸಂಧಿಗೆ ಸಂಬಂಧಿಸಿದ ವಿಶೇಷ ಉಡುಗೊರೆಯನ್ನು ಕಳುಹಿಸಿದೆ ಎಂದು ಮಂಗಳವಾರ ಹೇಳಿದ್ದಾರೆ. ಆದರೆ ಅದ್ಯಾವ ಉಡುಗೊರೆ ಎಂಬ ಗುಟ್ಟನ್ನು ಅವರು ಬಿಟ್ಟುಕೊಟ್ಟಿಲ್ಲ. ಮಧ್ಯಪ್ರಾಚ್ಯ ಯುದ್ಧದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಿನಕ್ಕೊಂದು ಹೇಳಿಕೆ ಕೊಡುವುದನ್ನು ಮುಂದುವರಿಸಿದ್ದು, ಇರಾನ್‌ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದದಿರಲು ಒಪ್ಪಿಕೊಂಡಿದೆ. ಹೋರ್ಮುಜ್‌ ಜಲಸಂಧಿಗೆ ಸಂಬಂಧಿಸಿದ ವಿಶೇಷ ಉಡುಗೊರೆಯನ್ನು ಕಳುಹಿಸಿದೆ ಓವಲ್‌ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇರಾನ್‌ ತಾನು ಎಂದಿಗೂ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದುವುದಿಲ್ಲ ಎಂದು ಒಪ್ಪಿಕೊಂಡಿದೆ. ಅದು ನಿನ್ನೆ ಅದ್ಭುತವಾದ ಕೆಲಸ ಮಾಡಿದೆ. ಅಲ್ಲಿನ ನಾಯಕತ್ವವು ಅಮೆರಿಕಕ್ಕೆ ಹೋರ್ಮುಜ್ ಜಲಸಂಧಿ ಮತ್ತು ತೈಲ ಹರಿವಿಗೆ ಸಂಬಂಧಿಸಿದ ಮಹತ್ವದ ಉಡುಗೊರೆಯನ್ನು ಕಳಿಸಿಕೊಟ್ಟಿದೆ. ಅದು ಅಪಾರ ಹಣದ ಮೌಲ್ಯವುಳ್ಳ ಬಹಳ ದೊಡ್ಡ ಉಡುಗೊರೆ. ಆದರೆ ಅದು ಏನು ಎಂದು ನಾನು ನಿಮಗೆ ಹೇಳುವುದಿಲ್ಲ, ಅದು ಅಣ್ವಸ್ತ್ರಕ್ಕೆ ಸಂಬಂಧಿಸಿದ್ದಲ್ಲ. ತೈಲ ಹಾಗೂ ಅನಿಲಕ್ಕೆ ಸಂಬಂಧಿಸಿದ್ದು. ಅದು ಬಹಳ ಮಹತ್ವದ್ದು’ ಎಂದು ಮೆಚ್ಚುಗೆ ಸೂಚಿಸಿದರು. ‘ಇರಾನ್ ಒಪ್ಪಂದ ಮಾಡಿಕೊಳ್ಳಲು ಉತ್ಸುಕವಾಗಿದೆ. ಅಮೆರಿಕ ಉಪಾಧ್ಯಕ್ಷ ಜೆ. ಡಿ. ವ್ಯಾನ್ಸ್, ವಿದೇಶಾಂಗ ಸಚಿವ ಮಾರ್ಕೊ ರುಬಿಯೊ, ಮಧ್ಯಪ್ರಾಚ್ಯದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಜೇರೆಡ್ ಕುಶ್ನರ್ ಮಾತುಕತೆಯ ನೇತೃತ್ವ ವಹಿಸುತ್ತಿದ್ದಾರೆ’ ಎಂದರು.ಇದೇ ವೇಳೆ, ‘ಪ್ರಸ್ತುತ ಇರಾನಿನ ನಾಯಕತ್ವವು ಗಮನಾರ್ಹ ಬದಲಾವಣೆಗಳಿಗೆ ಒಳಗಾಗಿದೆ. ನಮಗೆ ನಿಜವಾಗಿಯೂ ಬೇಕಾಗಿದ್ದು ಇದೇ, ಆಡಳಿತ ಬದಲಾವಣೆ. ನಿಮಗೆ ಗೊತ್ತಾ? ಇದು ಆಡಳಿತದಲ್ಲಿನ ಬದಲಾವಣೆ. ಏಕೆಂದರೆ ಹೊಸ ನಾಯಕರು ಎಲ್ಲಾ ಸಮಸ್ಯೆಗಳಿಗೆ ಕಾರಣರಾದ ಹಳೆಯ ನಾಯಕರಿಗಿಂತ ಬಹಳ ಭಿನ್ನರಾಗಿದ್ದಾರೆ’ ಎಂದರು. ಈ ಮೂಲಕ ಆಡಳಿತ ಬದಲಾವಣೆಯೇ ನಮ್ಮ ಮುಖ್ಯ ಉದ್ದೇಶ, ಅದೀಗ ಸಾಕಾರವಾಗಿದೆ. ಹಾಗಾಗಿ ಯುದ್ಧ ನಿಲ್ಲಬಹುದು ಎಂಬ ಸುಳಿವು ನೀಡಿದ್ದಾರೆ .

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+