ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

  18 ವರ್ಷಗಳ ಇತಿಹಾಸ ಬದಲಿಸಿದ ಆರ್‌ಸಿಬಿ ಬಾಯ್ಸ್‌...! ರಣರೋಚಕ ಪ್ರದರ್ಶನ ನೀಡಿದ ಆರ್‌ಸಿಬಿ
ವರದಿಗಾರರು : shobha jagadish | ಸ್ಥಳ : Bengaluru | ದಿನಾಂಕ : 06-04-2026

18 ವರ್ಷಗಳ ಇತಿಹಾಸ ಬದಲಿಸಿದ ಆರ್‌ಸಿಬಿ ಬಾಯ್ಸ್‌...! ರಣರೋಚಕ ಪ್ರದರ್ಶನ ನೀಡಿದ ಆರ್‌ಸಿಬಿ

ಬೆಂಗಳೂರು: ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಸೂಪರ್‌ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಆರ್‌ಸಿಬಿ 18 ವರ್ಷಗಳ ಐಪಿಎಲ್‌ ಇತಿಹಾಸವನ್ನೇ ಬುಡಮೇಲು ಮಾಡಿದರು. ಅದು 5 ಬಾರಿ ಚಾಂಪಿಯನ್‌ ಆಗಿ ಮೆರೆದಾಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ.ಹೌದು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು.ಈ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಆರ್​ಸಿಬಿ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್​​ಗಳು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 250 ರನ್​ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆ ಆರ್​ಸಿಬಿ ಪಾತ್ರವಾಯಿತು. ಕಳೆದ 18 ವರ್ಷಗಳಲ್ಲಿ ಸಿಎಸ್​ಕೆ ವಿರುದ್ಧ ಯಾವುದೇ ತಂಡ 235 ಕ್ಕಿಂತ ಹೆಚ್ಚಿನ ಸ್ಕೋರ್​ ಗಳಿಸಲು ಸಾಧ್ಯವಾಗಿರಲಿಲ್ಲ. 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ 2024 ರಲ್ಲಿ ಗುಜರಾತ್ ಟೈಟಾನ್ಸ್ ತಂಡವು 231 ರನ್​ಗಳಿಸಿದ್ದು ಈವರೆಗಿನ ಶ್ರೇಷ್ಠ ಸಾಧನೆಯಾಗಿತ್ತು. ಆದರೆ ಈ ಬಾರಿ ಆರ್​ಸಿಬಿ ದಾಂಡಿಗರು ಸಿಎಸ್​ಕೆ ತಂಡದ ಎಲ್ಲಾ ಲೆಕ್ಕಾಚಾರಗಳನ್ನ ತಲೆ ಕೆಳಗಾಗಿಸಿದರು. 20 ಓವರ್​​ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲರ್​ಗಳನ್ನ ಚೆಂಡಾಡುವ ಮೂಲಕ ಬರೋಬ್ಬರಿ 250 ರನ್​ ಚಚ್ಚಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 5 ಬಾರಿಯ ಚಾಂಪಿಯನ್ ಸಿಎಸ್​ಕೆ ವಿರುದ್ಧ 250 ರನ್​ ಕಲೆಹಾಕಿದ ಮೊದಲ ತಂಡವೆಂಬ ಹೆಗ್ಗಳಿಕೆ ಒಂದು ಕಡೆಯಾದ್ರೆ, 36 ಬಾರಿ 200+ ರನ್‌ ಗಳಿಸಿ, ಸಿಎಸ್‌ಕೆ ದಾಖಲೆಯನ್ನ ಪುಡಿ ಪುಡಿ ಮಾಡಿದ್ದು ಮತ್ತೊಂದು ವಿಶೇಷ

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1909+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2139+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4602+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4780+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4801+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4880+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7359+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7840+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7878+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13074+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13197+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13473+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13493+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27461+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30499+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30519+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30548+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33552+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33557+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33679+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33773+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33804+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39350+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39439+