ಧುರಂಧರ್ 2 ಎದುರು ಮಂಕಾದ ಪವನ್ ಕಲ್ಯಾಣ್ ಅಭಿನಯದ ಉಸ್ತಾದ್ ಭಗತ್ ಸಿಂಗ್
ಧುರಂಧರ್ 2 ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದ್ದು, ಪವನ್ ಕಲ್ಯಾಣ್ ಅಭಿನಯದ ಉಸ್ತಾದ್ ಭಗತ್ ಸಿಂಗ್ ಚಿತ್ರವನ್ನು ಮೀರಿಸಿದೆ. ಧುರಂಧರ್ 2 ಮಂಗಳವಾರ 56 ಕೋಟಿ ಗಳಿಸಿದರೆ, ಉಸ್ತಾದ್ ಭಗತ್ ಸಿಂಗ್ ಕೇವಲ 1.5 ಕೋಟಿ ಗಳಿಸಿದೆ. ಪವನ್ ಕಲ್ಯಾಣ್ ಅವರ ಇತ್ತೀಚಿನ ಚಿತ್ರಗಳು ನಿರೀಕ್ಷೆ ಮೂಡಿಸದೆ ನಿರಾಸೆ ಮೂಡಿಸಿವೆ. ಧುರಂಧರ್ 2 ಸಿನಿಮಾ ಅಬ್ಬರಕ್ಕೆ ಎಲ್ಲರೂ ನಡುಗಿ ಹೋಗಿದ್ದಾರೆ. ಇಡೀ ಬಾಕ್ಸ್ ಆಫೀಸ್ ಶೇಕ್ ಆಗುತ್ತಿದೆ. ಈ ಚಿತ್ರದ ನಾಗಾಲೋಟಕ್ಕೆ ಎಲ್ಲಾ ಸಿನಿಮಾಗಳು ಮಂಕಾಗುತ್ತಿವೆ. ಪವನ್ ಕಲ್ಯಾಣ್ ನಟನೆಯ ಉಸ್ತಾದ್ ಭಗತ್ ಸಿಂಗ್ ಚಿತ್ರವಂತೂ ಮಕಾಡೆ ಮಲಗಿದೆ. ಈ ಚಿತ್ರ ಮಂಗಳವಾರ ಗಳಿಕೆ ಮಾಡಿದ್ದು ಕೇಲವ ಒಂದು ಕೋಟಿ ರೂಪಾಯಿ. ಆದರೆ, ತೆಲುಗು ಭಾಷೆಯಲ್ಲಿ ಡಬ್ ಆಗಿ ರಿಲೀಸ್ ಆದ ಧುರಂಧರ್ 2 ಸಿನಿಮಾ, ಪವನ್ ಚಿತ್ರಕ್ಕಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ಧುರಂಧರ್ 2 ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನೂ ಮೀರಿ ಧುರಂಧರ್ 2 ಸಿನಿಮಾ ಗೆಲುವು ಕಂಡಿದೆ. ಈ ಚಿತ್ರದ ಗಳಿಕೆ ಮಂಗಳವಾರ 56 ಕೋಟಿ ರೂಪಾಯಿ ಇದೆ. ತೆಲುಗು ಭಾಷೆಯಲ್ಲೇ ಚಿತ್ರ ಮೂರು ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಧುರಂಧರ್ 2 ಚಿತ್ರವು ಅನಾಯಾಸವಾಗಿ ಉಸ್ತಾದ್ ಭಗತ್ ಸಿಂಗ್ ಚಿತ್ರವನ್ನು ಮಣಿಸಿದೆ. ಪವನ್ ಚಿತ್ರ ಮಂಗಳವಾರ ಒಂದೂವರೆ ಕೋಟಿ ರೂಪಾಯಿ ಗಳಿಸಿದೆ ಎಂದು ವರದಿ ಆಗಿದೆ. ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಒಪ್ಪಿಕೊಂಡ ಚಿತ್ರಗಳನ್ನು ಮುಗಿಸಬೇಕಾದ ಅನಿವಾರ್ಯತೆ ಕಾರಣದಿಂದ ಆದಷ್ಟು ಪ್ರಯತ್ನಿಸಿ ಶೂಟ್ ಮುಗಿಸಿಕೊಟ್ಟರು. ಓಜಿ, ಹರಿ ಹರ ವೀರ ಮಲ್ಲು ಸಿನಿಮಾಗಳು ರಿಲೀಸ್ ಆಗಿ ಸೋತವು. ಈ ಸಾಲಿಗೆ ಉಸ್ತಾದ್ ಭಗತ್ ಸಿಂಗ್ ಕೂಡ ಸೇರ್ಪಡೆ ಆಗುತ್ತಿದೆ. ಪವನ್ ಕಲ್ಯಾಣ್ಗೆ ಟಾಲಿವುಡ್ನಲ್ಲಿ ಬಹುಬೇಡಿಕೆ ಇದೆ. ಅವರು ಅನೇಕ ಚಿತ್ರಗಳನ್ನು ಮಣಿಸಿದ್ದಾರೆ. ಆದರೆ, ಈಗ ಅವರು ಧುರಂಧರ್ 2 ಚಿತ್ರದ ಎದುರು ಮಂಡಿ ಊರಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಪವನ್ ಚಿತ್ರಕ್ಕೆ ಈಗಾಗಲೇ ಸಾಕಷ್ಟು ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಹೀಗಾಗಿ, ಅವರ ಸಿನಿಮಾ ಮತ್ತೆ ಮೇಲಕ್ಕೆ ಏಳೋದು ಅನುಮಾನ ಎಂದೇ ಹೇಳಲಾಗುತ್ತಾ ಇದೆ.
ಇತರೆ ಸುದ್ದಿಗಳು