ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನಟ ರಕ್ಷಿತ್ ಶೆಟ್ಟಿಗೆ 25 ಲಕ್ಷ ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್...!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 01-04-2026

ನಟ ರಕ್ಷಿತ್ ಶೆಟ್ಟಿಗೆ 25 ಲಕ್ಷ ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್...!

ರಕ್ಷಿತ್ ಶೆಟ್ಟಿ ಅವರ ಮಾಲೀಕತ್ವದ ಪರಂವಾ ಸ್ಟುಡಿಯೋಸ್‌ಗೆ ದೆಹಲಿ ಹೈಕೋರ್ಟ್‌ ದಂಡ ವಿಧಿಸಿದೆ. ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಅನುಮತಿ ಇಲ್ಲದೆ ಹಾಡು ಬಳಸಿದ್ದಕ್ಕೆ ಈ ದಂಡ ವಿಧಿಸಿದೆ. 20 ಲಕ್ಷ ರೂ. ಕಾಪಿರೈಟ್‌ ಉಲ್ಲಂಘನೆಗೆ ಉಳಿದ 5 ಲಕ್ಷ ರೂ. ನ್ಯಾಯಾಲಯದ ಆದೇಶ ಪಾಲಿಸದ ಕಾರಣಕ್ಕೆ ದಂಡ ಹಾಕಲಾಗಿದೆ. ಎಂಆರ್‌ಟಿ ಮ್ಯೂಸಿಕ್ ಕಂಪನಿಯು ಹೈಕೋರ್ಟ್‌ ಮೊರೆ ಹೋಗಿದ್ದು, ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ಪೀಠವು ಈ ಆದೇಶ ನೀಡಿದೆ. ನಟ ಮತ್ತು ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ಮಾಲೀಕತ್ವದ ಪರಂವಾ ಸ್ಟುಡಿಯೋಸ್ ನಿರ್ಮಾಣದ ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಅನುಮತಿಯಿಲ್ಲದೆ ಹಾಡುಗಳನ್ನು ಬಳಸಿದ್ದಕ್ಕಾಗಿ ದೆಹಲಿ ಹೈಕೋರ್ಟ್ ಒಟ್ಟು 25 ಲಕ್ಷ ರೂಪಾಯಿ ದಂಡ ವಿಧಿಸಿದೆ.ಎಂಆರ್‌ಟಿ ಮ್ಯೂಸಿಕ್ ಕಂಪನಿಗೆ ಸೇರಿದ ಎರಡು ಹಾಡುಗಳನ್ನು ಅಕ್ರಮವಾಗಿ ಬಳಸಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ತೇಜಸ್ ಕರಿಯಾ ಈ ಆದೇಶ ನೀಡಿದ್ದಾರೆ. ಈ ಮೊತ್ತದಲ್ಲಿ 20 ಲಕ್ಷ ರೂಪಾಯಿ ಕಾಪಿರೈಟ್ ಉಲ್ಲಂಘನೆಗಾಗಿ ಮತ್ತು ಉಳಿದ 5 ಲಕ್ಷ ರೂಪಾಯಿ ನ್ಯಾಯಾಲಯದ ಆದೇಶ ಪಾಲಿಸಲು ವಿಳಂಬ ಮಾಡಿದ್ದಕ್ಕಾಗಿ ವಿಧಿಸಲಾಗಿದೆ.ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ 'ಒಮ್ಮೆ ನಿನ್ನನ್ನು' ಮತ್ತು 'ನ್ಯಾಯ ಎಲ್ಲಿದೆ' ಎಂಬ ಎರಡು ಹಳೆಯ ಹಾಡುಗಳ ತುಣುಕುಗಳನ್ನು ಬಳಸಲಾಗಿತ್ತು. ಈ ಹಾಡುಗಳ ಹಕ್ಕುಗಳನ್ನು ಹೊಂದಿರುವ ಎಂಆರ್‌ಟಿ ಮ್ಯೂಸಿಕ್, ತಮ್ಮ ಅನುಮತಿ ಪಡೆಯದೆ ಇವುಗಳನ್ನು ಬಳಸಲಾಗಿದೆ ಎಂದು ನ್ಯಾಯಾಲಯದ ಮೆಟ್ಟಿಲೇರಿತ್ತು.ಪರಂವಾ ಸ್ಟುಡಿಯೋಸ್ ಪರ ವಕೀಲರು, ಸಿನಿಮಾದಲ್ಲಿ ಈ ಹಾಡುಗಳನ್ನು ಕೇವಲ ಕೆಲವೇ ಸೆಕೆಂಡುಗಳ ಕಾಲ ಮಾತ್ರ ಬಳಸಲಾಗಿದೆ, ಇದು ಅತಿ ಕಡಿಮೆ ಅವಧಿಯಾದ್ದರಿಂದ ಉಲ್ಲಂಘನೆಯಾಗುವುದಿಲ್ಲ ಎಂದು ವಾದಿಸಿದ್ದರು. ಆದರೆ, ಇದನ್ನು ತಳ್ಳಿಹಾಕಿದ ನ್ಯಾಯಾಧೀಶರು, "ಕಥೆಯ ಓಟಕ್ಕೆ ಮತ್ತು ನಾಯಕನ ಪರಿಸ್ಥಿತಿಯನ್ನು ವಿವರಿಸಲು ಉದ್ದೇಶಪೂರ್ವಕವಾಗಿಯೇ ಈ ಹಾಡುಗಳನ್ನು ಆರಿಸಿಕೊಳ್ಳಲಾಗಿದೆ. ಕಾಪಿರೈಟ್ ಕಾಯ್ದೆಯ ಪ್ರಕಾರ ಒಂದು ಸೆಕೆಂಡ್ ಅಥವಾ ಒಂದು ಫ್ರೇಮ್ ಬಳಸಿದರೂ ಅನುಮತಿ ಕಡ್ಡಾಯ" ಎಂದು ಅಭಿಪ್ರಾಯಪಟ್ಟರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+