ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ವಿಶ್ವ ಹಿಂದಿ ದಿನ (World Hindi Day) : ಇದರ ಇತಿಹಾಸ, ಮಹತ್ವ ಮತ್ತು ಆಚರಣೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 10-01-2026

ವಿಶ್ವ ಹಿಂದಿ ದಿನ (World Hindi Day) : ಇದರ ಇತಿಹಾಸ, ಮಹತ್ವ ಮತ್ತು ಆಚರಣೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಜನವರಿ 10 ವಿಶ್ವ ಹಿಂದಿ ದಿನ. ಸಾಹಿತ್ಯ ಕ್ಷೇತ್ರಕ್ಕೆ ಹಿಂದಿ ಭಾಷೆಯ ಕೊಡುಗೆ ಮತ್ತು ಅದರ ಪರಂಪರೆ ನೆನಪಿಸುವ ದಿನವಾಗಿದೆ. ಜಗತ್ತಿನಲ್ಲಿ ಜನರು ಹೆಚ್ಚಾಗಿ ಮಾತನಾಡುವ ಭಾಷೆಗಳ ಸಾಲಿನಲ್ಲಿ ಹಿಂದಿಯು ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದು, ಜನವರಿ 10 ರಂದು ಜಾಗತಿಕ ಮಟ್ಟದಲ್ಲಿ ವಿಶ್ವ ಹಿಂದಿ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಣೆ ಹಿಂದಿನ ಇತಿಹಾಸ, ಮಹತ್ವ ಸೇರಿದಂತೆ ಇನ್ನಿತ್ತರ ಮಾಹಿತಿ ಇಲ್ಲಿದೆ.

ಹಿಂದಿ ಭಾಷೆ ದೇವನಾಗರಿ ಲಿಪಿಯಲ್ಲಿದ್ದು ಇದು ವೈಜ್ಞಾನಿಕ ಲಿಪಿಯಾಗಿದೆ. ವಿಶ್ವದ ಭಾಷೆಗಳ ಸಾಂಕೇತಿಕತೆಯ ಕ್ಷಮತೆಯೂ ಈ ದೇವನಾಗರಿಯಲ್ಲಿದೆ ಎನ್ನುವ ಅಭಿಪ್ರಾಯ ವಿದ್ವಾಂಸರದ್ದು. ಭಾರತ ಸೇರಿದಂತೆ ವಿಶ್ವದ ಅನೇಕ ದೇಶಗಳಲ್ಲಿ ಪ್ರಚಲಿತದಲ್ಲಿರುವ ಆಡು ಭಾಷೆಯೇ ಇದಾಗಿದೆ. ಭಾರತದಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಜಾರ್ಖಂಡ್, ಉತ್ತರಾಖಂಡ, ಛತ್ತೀಸ್‌ಗಢ, ಬಿಹಾರ, ಹರಿಯಾಣ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ಹಿಂದಿ ಮಾತನಾಡುವ ಜನರಿದ್ದಾರೆ. ಭಾರತೀಯ ಸಾಹಿತ್ಯ ಲೋಕಕ್ಕೆ ಹಿಂದಿ ಭಾಷೆಯ ಕೊಡುಗೆ ಅಪಾರವಾಗಿದ್ದು, ಈ ಭಾಷೆಯ ಪ್ರಾಮುಖ್ಯತೆಯನ್ನು ತಿಳಿಸಲು ಹಾಗೂ ಭಾಷೆಯ ಕೊಡುಗೆಯನ್ನು ಗೌರವಿಸುವ ಸಲುವಾಗಿ ವಿಶ್ವ ಹಿಂದಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಹಿಂದಿ ದಿನದ ಇತಿಹಾಸ

ಪ್ರತಿ ವರ್ಷ ಜನವರಿ 10 ರಂದು ವಿಶ್ವ ಹಿಂದಿ ದಿನ ವನ್ನು ಆಚರಿಸಿಕೊಂಡು ಬರಲಾಗುತ್ತಿದೆ. 1975 ಜನವರಿ 10 ರಂದು ನಾಗಪುರದಲ್ಲಿ ಮೊದಲ ‘ವಿಶ್ವ ಹಿಂದಿ ಸಮ್ಮೇಳನ’ವನ್ನು ಆಚರಿಸಲಾಯಿತು. 2005 ರಲ್ಲಿ ಜೂನ್ 8 ರಂದು ನಡೆದ ವಿಶ್ವ ಹಿಂದಿ ಸಮ್ಮೇಳನದ ಅನುಸರಣಾ ಸಮಿತಿಯ ಸಭೆಯಲ್ಲಿ ಪ್ರತಿ ವರ್ಷ ಜನವರಿ 10 ಅನ್ನು ವಿಶ್ವ ಹಿಂದಿ ದಿನವನ್ನಾಗಿ ಆಚರಿಸಲು ನಿರ್ಧಾರ ಮಾಡಲಾಯಿತು. 2006 ರ ಜನವರಿ 10 ರಂದು ಮೊದಲ ಬಾರಿಗೆ ವಿಶ್ವ ಹಿಂದಿ ದಿನವನ್ನು ಆಚರಿಸಲಾಯಿತು. ಅಂದಿನಿಂದ ಜಾಗತಿಕ ಮಟ್ಟದಲ್ಲಿ ವಿಶ್ವ ಹಿಂದಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ವಿಶ್ವ ಹಿಂದಿ ಭಾಷೆ ಮಹತ್ವ ಹಾಗೂ ಆಚರಣೆ ಹಿಂದಿ ಭಾಷೆಯ ಶ್ರೀಮಂತ ಪರಂಪರೆ, ಸಾಹಿತ್ಯದ ಮೇಲೆ ಹಿಂದಿಯ ಪ್ರಭಾವ ಮತ್ತು ಡಿಜಿಟಲ್ ಜಗತ್ತಿನಲ್ಲಿ ಹಿಂದಿ ಭಾಷೆಯ ಪ್ರಾಮುಖ್ಯತೆಯನ್ನು ತಿಳಿಸುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ

ಭಾರತದಲ್ಲಿ ಇಂಗ್ಲೀಷ್‌ ಜೊತೆಗೆ ಬಳಕೆ ಮಾಡುವ ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದಾಗಿದೆ. ವಿಶ್ವ ಹಿಂದಿ ದಿನದಂದು ಭಾಷಣ, ನಾಟಕ, ಸಂಗೀತ ಮತ್ತು ಮುಂತಾದ ಕಲೆಗಳ ಮುಖಾಂತರ ಹಿಂದಿ ಭಾಷೆಯ ಬಗ್ಗೆ ಅರಿವನ್ನು ಮೂಡಿಸಲಾಗುತ್ತದೆ. ಶಾಲಾ ಕಾಲೇಜು ವಿವಿಧ ಸಂಘ ಸಂಸ್ಥೆಗಳು ಸೆಮಿನಾರ್‌ಗಳು, ಕಾರ್ಯಾಗಾರಗಳು ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಭಾರತದಲ್ಲಿ ಹಿಂದಿ ಮಾತನಾಡುವವರ ಸಂಖ್ಯೆ ಎಷ್ಟು? 2011 ರ ಭಾಷೆಗಳ ಜನಗಣತಿಯ ಪ್ರಕಾರ, ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆಯಲ್ಲಿ ಹಿಂದಿ ಕೂಡ ಸೇರಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಜಾರ್ಖಂಡ್, ಉತ್ತರಾಖಂಡ, ಛತ್ತೀಸ್‌ಗಢ, ಬಿಹಾರ, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಸಂವಹನಕ್ಕಾಗಿ ಹಿಂದಿಯನ್ನೇ ಬಳಸುತ್ತಿದ್ದಾರೆ. 2011ರ ಜನಗಣತಿಯ ಪ್ರಕಾರ ಹಿಂದಿಯನ್ನು ಮಾತೃಭಾಷೆಯಾಗಿ ಮಾತನಾಡುವವರ ಸಂಖ್ಯೆ 2001ರ ಜನಗಣತಿಗೆ ಹೋಲಿಸಿದರೆ ಹೆಚ್ಚಾಗಿದೆ. 2001 ರಲ್ಲಿ, 41.03% ಜನರು ಹಿಂದಿಯನ್ನು ಮಾತೃಭಾಷೆಯಾಗಿ ಮಾತನಾಡುತ್ತಿದ್ದರು. ಅದೇ ಹತ್ತು ವರ್ಷಗಳ ಬಳಿಕ ಅಂದರೆ 2011 ರಲ್ಲಿ ಶೇಕಡಾ 43.63 ರಷ್ಟು ಹಿಂದಿ ಮಾತನಾಡುವ ಜನರಿದ್ದಾರೆ. ಅದಲ್ಲದೇ ವಿಶ್ವದಲ್ಲಿ ಮ್ಯಾಂಡರಿನ್, ಸ್ಪ್ಯಾನಿಷ್ ಮತ್ತು ಇಂಗ್ಲಿಷ್ ನಂತರದಲ್ಲಿ ಹಿಂದಿ ಕೂಡ ವಿಶ್ವದಲ್ಲೇ ಹೆಚ್ಚು ಮಾತನಾಡುವ ನಾಲ್ಕನೇ ಭಾಷೆಯೆನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 59079+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 59103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 59102+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 59132+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 59294+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 59364+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 59483+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 59668+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 59613+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 59779+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 59784+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 59802+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 59799+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 59825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 59847+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 61304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 61389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 61714+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 61723+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 62152+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 62133+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 67089+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 67073+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 67082+