ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನನ್ನ ಚಪ್ಪಲಿ ಸೈಜ್ 9 ಎಂದು ಕೆಟ್ಟದಾಗಿ ಕಾಮೆಂಟ್ ಮಾಡಿದವನಿಗೆ ಉತ್ತರಿಸಿದ ಅದಾ ಶರ್ಮಾ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 04-04-2026

ನನ್ನ ಚಪ್ಪಲಿ ಸೈಜ್ 9 ಎಂದು ಕೆಟ್ಟದಾಗಿ ಕಾಮೆಂಟ್ ಮಾಡಿದವನಿಗೆ ಉತ್ತರಿಸಿದ ಅದಾ ಶರ್ಮಾ...

ನಟ ಪುನೀತ್ ರಾಜ್​​ಕುಮಾರ್ ನಟನೆಯ ರಣ ವಿಕ್ರಮ ಸಿನಿಮಾದ ಮೂಲಕ ಎಲ್ಲರ ಮನಸ್ಸು ಗೆದ್ದ ಚೆಲುವೆ. ಕೇರಳ ಸ್ಟೋರಿ ಸಿನಿಮಾ ಮೂಲಕ ಇಡೀ ಭಾರತ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ನಟಿ ಅದಾ ಶರ್ಮಾ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಚುರುಕು. ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ವಿವಿಧ ರೀತಿಯ ಪೋಸ್ಟ್ ಗಳನ್ನು ಹಾಕುತ್ತಾ, ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿ ಇರುತ್ತಾರೆ ನಟಿ ಅದಾ. ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಆಸ್ಕ್ ಮಿ ಎನಿಥಿಂಗ್ ಎಂದು ಪೋಸ್ಟ್ ಮಾಡಿದ್ದರು. ಈ ವೇಳೆ ಕೇಳಿಬಂದ ಅಶ್ಲೀಲ ಪ್ರಶ್ನೆಗೆ ನಟಿ ಸರಿಯಾಗಿಯೇ ತಿರುಗೇಟು ನೀಡಿದ್ದಾರೆ. ನಟಿ ಅದಾ ಶರ್ಮಾ ಅಭಿಮಾನಿಗಳಿಗೆ ಬಾಲಿವುಡ್ ನಟಿಯಾಗಿ ಪರಿಚಿತರಾದರೂ, ಅವರು ಕನ್ನಡ ಸಿನಿಮಾ ಜಗತ್ತಿಗೆ ಹೊಸಬರಲ್ಲ. ಪುನೀತ್ ರಾಜ್​​ಕುಮಾರ್ ನಟನೆಯ ರಣ ವಿಕ್ರಮ ಸಿನಿಮಾದ ಮೂಲಕ ಕನ್ನಡ ಪ್ರೇಕ್ಷಕರಿಗೆ ಹತ್ತಿರವಾದರು. ಈ ಚಿತ್ರ ಯಶಸ್ವಿಯಾಗಿ ಮುನ್ನುಗಿತ್ತು, ಅಷ್ಟೇ ಅಲ್ಲದೆ ಅವರ ಅಭಿನಯಕ್ಕೂ ಉತ್ತಮ ಮೆಚ್ಚುಗೆ ಸಿಕ್ಕಿತ್ತು. ಇನ್ನು ಅದಾ ಶರ್ಮಾ ಸಿನಿ ಜರ್ನಿಗೆ ದೊಡ್ಡ ತಿರುವು ತಂದ ಚಿತ್ರವೆಂದರೆ ದಿ ಕೇರಳ ಸ್ಟೋರಿ. ಬಿಡುಗಡೆಯಾಗುತ್ತಿದ್ದಂತೆಯೇ ಭಾರತದೆಲ್ಲೆಡೆ ಸಂಚಲನ ಸೃಷ್ಟಿಸಿದ ಈ ಚಿತ್ರ, ಅವರನ್ನು ರಾಷ್ಟ್ರ ಮಟ್ಟದ ಜನಪ್ರಿಯ ನಟಿಯರ ಸಾಲಿಗೆ ಏರಿಸಿತು. ಈ ಚಿತ್ರದ ನಂತರ ಅವರು ಹಿಂದಿ ಸಿನಿಮಾಗಳಲ್ಲಿ ಇನ್ನಷ್ಟು ಬ್ಯುಸಿಯಾಗಿದ್ದಾರೆ. ಅದಾ ಶರ್ಮ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಅನೇಕ ಫೋಟೋಗಳು ಮತ್ತು ವೀಡಿಯೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಕೆಲವೊಮ್ಮೆ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಗಮನ ಸೆಳೆಯುತ್ತಾರೆ. ಇಂತಹ ಸಂದರ್ಭಗಳಲ್ಲಿ ಕಮೆಂಟ್ ಸೆಕ್ಷನ್‌ನಲ್ಲಿ ಅಶ್ಲೀಲ ಕಮೆಂಟ್‌ಗಳು ಸಾಮಾನ್ಯವಾಗಿರುತ್ತವೆ. ಕೆಲವು ನಟಿಯರು ಇದನ್ನು ನಿರ್ಲಕ್ಷಿಸುತ್ತಾರೆ, ಆದರೆ ಅದಾ ಹಾಗೆ ಮಾಡಲಿಲ್ಲ. ಬದಲಾಗಿ ಅಶ್ಲೀಲ ಕಮೆಂಟ್ ಮಾಡಿದವರಿಗೆ ದಿಟ್ಟವಾಗಿ ಉತ್ತರ ನೀಡಿದ್ದಾರೆ. ಇತ್ತೀಚೆಗೆ ನಟಿ ಅದಾ ಶರ್ಮಾ ಇನ್‌ಸ್ಟಾಗ್ರಾಮ್‌ನಲ್ಲಿ ಆಸ್ಕ್ ಮಿ ಎನಿಥಿಂಗ್ ಎಂದು ಕೇಳಿದಾಗ, ಒಬ್ಬ ಬಳಕೆದಾರ ‘ನಿಮ್ಮ ಸೈಜ್ ಎಷ್ಟು’ ಎಂದು ಅಸಭ್ಯ ಪ್ರಶ್ನೆಯನ್ನು ಕೇಳಿದ್ದಾರೆ. ಇದನ್ನು ನೋಡಿದ ಅದಾ ಶರ್ಮಾ ಸುಮ್ಮನಿರದೆ ಸರಿಯಾಗಿಯೇ ಟಾಂಗ್ ನೀಡಿದ್ದಾರೆ. ನನ್ನ ಸೈಜ್ 9, ಆದರೆ ನನ್ನ ಚಪ್ಪಲಿಯದು’ ಎಂದು ದಿಟ್ಟವಾಗಿ ಉತ್ತರಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1909+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2139+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4602+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4780+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4801+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4880+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7359+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7840+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7878+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13074+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13197+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13473+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13493+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27461+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30499+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30519+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30548+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33552+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33557+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33679+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33773+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33804+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39350+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39439+